Monday, December 27, 2010

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ..

ಸಂಗೀತ: ಮನೋಮೂರ್ತಿ
ಗಾಯನ: ಸೋನು ನಿಗಂ
**** 
ಹೇ ಹೇ ಹೇ.. ಆಹಾಹ..
ತನನಾನ ತನನಾನ ತನನಾನನ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
ಈ ಎದೆಯಲ್ಲಿ ಸಿಹಿಯಾದ ಕೋಲಾಹಲ
ನನ್ನೆದುರಲ್ಲಿ ನೀ ಹೀಗೆ ಬಂದಾಗಲೆ
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ
ನಾ ನಿಂತಲ್ಲೇ ಹಾಡಾದೆ ನಿನ್ನಿಂದಲೇ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
ಇರುಳಲ್ಲಿ ಜ್ವರದಂತೆ ಕಾಡಿ ಈಗ
ಹಾಯಾಗಿ ನಿಂತಿರುವೆ ಸರಿಯೇನು ?
ಬೇಕಂತಲೇ ಮಾಡಿ ಏನೋ ಮೋಡಿ
ಇನ್ನೆಲ್ಲೊ ನೋಡುವ ಪರಿಯೇನು
ಈ ಮಾಯೆಗೆ ಈ ಮರುಳಿಗೆ
ನಿನ್ನಿಂದ ಕಳೆ ಬಂದಿದೆ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ಹೇ ಹೇ ಹೇ.. ಆಹಾಹ..
ತನನಾನ ತನನಾನ ತನನಾನನ
ಹೋದಲ್ಲಿ ಬಂದಲ್ಲಿ ಎಲ್ಲ ನಿನ್ನ
ಸೊಂಪಾದ ಚೆಲುವಿನ ಗುಣಗಾನ
ಕೇದಗೆ ಗರಿಯಂತೆ ನಿನ್ನ ನೋಟ
ನನಗೇನೋ ಅಂದಂತೆ ಅನುಮಾನ
ಕಣ್ಣಿಂದಲೆ ಸದ್ದಿಲ್ಲದೆ
ಮುದ್ದಾದ ಕರೆ ಬಂದಿದೆ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ಈ ಎದೆಯಲ್ಲಿ ಸಿಹಿಯಾದ ಕೋಲಾಹಲ
ನನ್ನೆದುರಲ್ಲಿ ನೀ ಹೀಗೆ ಬಂದಾಗಲೆ
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ
ನಾ ನಿಂತಲ್ಲೇ ಹಾಡಾದೆ ನಿನ್ನಿಂದಲೆ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ..

No comments:

Post a Comment