Tuesday, December 28, 2010

ಮಾತಿನಲ್ಲಿ ಹೇಳಲಾರೆನು ರೇಖೆಯಲ್ಲಿ ಗೀಚಲಾರೆನು


ಸಾಹಿತ್ಯ:ಜಯಂತ್ ಕಾಯ್ಕಣಿ
ಸಂಗೀತ:ಮನೋಮೂರ್ತಿ
ಗಾಯಕರು: ಸೋನು ನಿಗಮ್
****
ಮಾತಿನಲ್ಲಿ ಹೇಳಲಾರೆನು ರೇಖೆಯಲ್ಲಿ ಗೀಚಲಾರೆನು
ಆದರೂನು ಹಾಡದೇನೆ ಉಳಿಯಲಾರೆನು.
ಅಂತ ರೂಪಸಿ ನನ್ನ ಪ್ರೇಯಸಿ
ಎಲ್ಲಿ ಇರುವಳೋ ನನ್ನ ಕಾಯಿಸಿ
ನಾನು ಪ್ರೇಮ ರೋಗಿ ದಯಮಾಡಿ ವಾಸಿ ಮಾಡಬೇಡಿ
ಅಂತ ರೂಪಸಿ ನನ್ನ ಪ್ರೇಯಸಿ
ಒಮ್ಮೆ ಅವಳಿಗೆ ನನ್ನ ತೋರಿಸಿ
ಕಣ್ಣಲಿದೆ ಆ ಕಣ್ಣಲಿದೆ ಹೊಂಬೆಳಕಿನ ನವ ನೀಲಾಂಜನ
ಇನ್ನೇಲ್ಲಿದೆ ಆಹ ಇನ್ನೇಲ್ಲಿದೆ ಹೂ ಮನಸಿನ ಆ ಮಧು ಗುಂಜನ
ಬೇರೆಯೇನು ಕಾಣಲಾರೆ ಯಾರ ನಾನು ದೂರಲಾರೆ
ಸಾಕು ಇನ್ನು ದೂರವನ್ನು ತಾಳಲಾರೆನು
ನನ್ನ ಕನಸಿನಲ್ಲಿ ದಯಮಾಡಿ ಪಾಲು ಕೇಳಬೇಡಿ
ಅಂತ ರೂಪಸಿ ನನ್ನ ಪ್ರೇಯಸಿ
ಒಮ್ಮೆ ಅವಳಿಗೆ ನನ್ನ ತೋರಿಸಿ
ನಗೆಯಲ್ಲಿದೆ ಆ ಬಗೆಯಲ್ಲಿದೆ ಬಗೆಹರಿಯದ ಆ ಅವಲೋಕನ
ನಡೆಯಲ್ಲಿದೆ ಆ ನುಡಿಯಲ್ಲಿದೆ ತಲೆ ಕೆಡಿಸುವ ಆ ಆಮಂತ್ರಣ
ಕನಸಿಗಿಂತ ಚೆಂದವಾಗಿ ಅಳಿಸದಂತ ಗಂಧವಾಗಿ
ಮೊದಲ ಬಾರಿ ಕಂಡ ಕ್ಷೆಣವೇ ಬಂಧಿಯಾದೆನು
ಹೋದೆ ನಾನು ಕೆಳೆದು ದಯಮಾಡಿ ಪತ್ತೆ ಮಾಡಬೇಡಿ
ಅಂತ ರೂಪಸಿ ನನ್ನ ಪ್ರೇಯಸಿ ಒಮ್ಮೆ ಅವಳಿಗೆ ನನ್ನ ತೋರಿಸಿ
||ಮಾತಿನಲ್ಲಿ ಹೇಳಲಾರೆನು||

No comments:

Post a Comment